ASIAN GAMES 2023 : ಪುರುಷರ 3000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಅವಿನಾಶ್ ಸಾಬ್ಳೆ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಅವಿನಾಶ್ ಸಾಬ್ಳೆ 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು
ಅವಿನಾಶ್ 8.19.54 ರಲ್ಲಿ ಮೊದಲ ಸ್ಥಾನ ಗಳಿಸಿ ಈ ಆವೃತ್ತಿಯಲ್ಲಿ ಭಾರತಕ್ಕೆ 12 ನೇ ಚಿನ್ನವನ್ನು ತಂದುಕೊಟ್ಟಿದ್ದಾರೆ. ಇದು ಭಾರತದ ಮೊದಲ ಅಥ್ಲೆಟಿಕ್ಸ್ ಚಿನ್ನದ ಪದಕವೂ ಆಗಿದೆ.
ಇನ್ನು ಮಹಿಳೆಯರ 50 ಕೆಜಿ ವಿಭಾಗದ ಸೆಮಿಫೈನಲ್’ನಲ್ಲಿ ಬಾಕ್ಸರ್ ನಿಖಾತ್ ಝರೀನ್ ಸೋಲಾನುಭವಿಸಿದ್ದು, ಕಂಚಿನ ಪದಕಕ್ಕೆ ತೃಪ್ತಿಪಟ್ಟಿದ್ದಾರೆ.
Advertisement. Scroll to continue reading.