ಮಣಿಪಾಲ : ಮನೆಯೊಂದರಲ್ಲಿ ಅನೈತಿ ಚಟುವಟಿಕೆ ನಡೆಸುತ್ತಿದ್ದು, ಪೊಲೀಸ್ ದಾಳು ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ಹೆರ್ಗಾ ಗ್ರಾಮದ ಸರಳೆಬೆಟ್ಟಿನಲ್ಲಿ ನಡೆದಿದೆ.
ಸೋಮವಾರ ದೇವರಾಜ್ಟಿ.ವಿ (ಪೊಲೀಸ್ ನಿರೀಕ್ಷಕರು ಮಣಿಪಾಲ ಪೊಲೀಸ್ ಠಾಣೆ) ಇವರು ಠಾಣೆಯಲ್ಲಿರುವಾಗ ಉಡುಪಿ ತಾಲೂಕು ಹೆರ್ಗಾ ಗ್ರಾಮದಲ್ಲಿರುವ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಬಾತ್ಮಿದಾರರ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಉಪಾಧೀಕ್ಷಕರು ಉಡುಪಿ ಉಪ ವಿಭಾಗ ಇವರಿಂದ ಶೋಧನಾ ವಾರೆಂಟ್ ಪಡೆದುಕೊಂಡು, ಸಿಬ್ಬಂದಿಗಳು ಹಾಗೂ ಪಂಚರೊಂದಿಗೆ ಹೆರ್ಗಾ ಗ್ರಾಮದ ಸರಳಬೆಟ್ಟಿ ಮನೆಯಲ್ಲಿ ದಾಳಿ ನಡೆಸಿದ್ದಾರೆ.
ಈ ವೇಳೆ ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ವಿಚಾರಿಸಿ ಅವರ ವಶದಲ್ಲಿದ್ದ 2 ಮೊಬೈಲ್ ಪೋನ್ಗಳು, ನಗದು 15000/- ರೂ, ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಕ್ರಮ ಹಣಗಳಿಸುವ ಉದ್ದೇಶದಿಂದ ಹುಡಿಗಿಯರನ್ನು ಪುಸಲಾಯಿಸಿ ಕರೆ ತಂದು ಅವರಿಗೆ ಬಲವಂತಾಗಿ ಪುರುಷರನ್ನು ಒದಗಿಸಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಶಿವರಾಜ(38) ಮಂಡ್ಯ ಮತ್ತು ನಿಂಗಪ್ಪ ಅಂಬಿಗೇರಾ(29) ಬಾಗಲಕೋಟೆ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಇನ್ನೊರ್ವ ನವೀನ್ಗೌಡ ಎಂಬಾತ ತಲೆಮರಿಸಿಕೊಂಡಿರುತ್ತಾನೆ.
ಈ ಬಗ್ಗೆ ಮಣಿಪಾಲ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


































