Connect with us

Hi, what are you looking for?

Diksoochi News

ಕರಾವಳಿ

ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ನಾಪತ್ತೆ

1

ಪಡುಬಿದ್ರಿ: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಶೃತಿನ್ ಶೆಟ್ಟಿ (35) ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಪೂಜಾ ಶೆಟ್ಟಿ ಶುಕ್ರವಾರದಂದು ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ ಕಾರ್ಕಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಅ. 16ರಂದು ರಜೆ ಹಾಕಿದ್ದು ತಾನು ಮನೆಗೆ ಬರುತ್ತಿರುವುದಾಗಿ ಪತ್ನಿಗೆ ಮೊಬೈಲ್ ಮೂಲಕ ತಿಳಿಸಿದ್ದರು. ಆದರೆ ಮನೆಗೂ ಬಾರದೆ, ಕಾರ್ಕಳ ನಗರ ಠಾಣೆಗೂ ಹೋಗದೆ  ಶೃತಿನ್ ಶೆಟ್ಟಿ ನಾಪತ್ತೆಯಾಗಿದ್ದಾರೆ. ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಭಡ್ತಿಗೊಂಡು ಕಾರ್ಕಳ ನಗರ ಪೊಲೀಸ್ ಠಾಣೆ ಹೆಡ್‌ ಕಾನ್‌ಸ್ಟೇಬಲ್ ಆಗಿ ಬಂದಿದ್ದರು.

Advertisement. Scroll to continue reading.

ಸದ್ಯ ಅವರ ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿದ್ದು, ಪೂಜಾ ಶೆಟ್ಟಿ ದೂರಿನ ಬಳಿಕ ಸಿಸಿಟಿವಿ ಫೂಟೇಜ್‌ಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.

178ಸೆ.ಮೀ. ಎತ್ತರ, ದೃಢಕಾಯದ ಶೃತಿನ್ ಶೆಟ್ಟಿ ತುಳು, ಕನ್ನಡ, ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳನ್ನು ಮಾತಾಡುತ್ತಾರೆ. ಇವರ ಗುರುತು, ಪರಿಚಯ ಯಾರಿಗಾದರೂ ಇದ್ದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ (0820 2555452)ಯನ್ನು ಸಂಪರ್ಕಿಸಲು ಪೊಲೀಸರು ಮನವಿ ಮಾಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!