ಮಂಗಳೂರು: ಬೈಕೊಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸಹಸವಾರ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 73ರ ನಂತೂರು – ಪಡೀಲ್ ನಡುವಿನ ನಿಡ್ಡೇಲ್ ಕ್ರಾಸ್ ಬಳಿ ಶನಿವಾರ ನಸುಕಿನ ವೇಳೆ ನಡೆದಿದೆ.
ಫರಂಗಿಪೇಟೆ ನಿವಾಸಿ ಕೀರ್ತಿಕ್ (21) ಮೃತಪಟ್ಟವರು.
ಮುಂಜಾನೆ ಸುಮಾರು 3.25ರ ಸುಮಾರಿಗೆ ಘಟನೆ ನಡೆದಿದೆ. ನಿಡ್ಡೇಲ್ ಕ್ರಾಸ್ ತಿರುವು ರಸ್ತೆಯಲ್ಲಿ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಬೈಕ್ ಚರಂಡಿಗೆ ಬಿದ್ದಿದೆ. ಪರಿಣಾಮ ಪ್ರಜ್ಞಾಹೀನರಾಗಿ ಬಿದ್ದಿದ್ದ ಕೀರ್ತಿಕ್ ಅವರನ್ನು ಸಾರ್ವಜನಿಕರು ಉಪಚರಿಸಿ, ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವೈದ್ಯರು ಪರಿಶೀಲಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
Advertisement. Scroll to continue reading.

ಮಂಗಳೂರು ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In this article:accident, death, Diksoochi news, mangaluru, nanthuru, niddel cross, padeel, road mishap
Click to comment

































