ಕುಂದಾಪುರ : ಕುಸಿದು ಬಿದ್ದು 12 ವರ್ಷದ ಬಾಲಕ ಮೃತಪಟ್ಟ ಘಟನೆ ಕುಂದಾಪುರದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಪ್ರಥ್ವಿರಾಜ್ (12) ಮೃತ ಬಾಲಕ.
ಪ್ರಥ್ವಿರಾಜ್ ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ಶಾಲೆಯಲ್ಲಿ 7ನೇ ತರಗತಿ ವಿಧ್ಯಾಭ್ಯಾಸ ಮಾಡುತ್ತಿದ್ದ. ಶನಿವಾರ ಬೆಳಿಗ್ಗೆ ಪ್ರಥ್ವಿರಾಜ್ ಮನೆಯಿಂದ ಶಾಲೆಗೆ ಹೊರಟು ಮನೆಯ ಎದುರು ರಸ್ತೆ ಬದಿಯಲ್ಲಿ ಶಾಲೆಯ ಬಸ್ಸಿಗೆ ಹತ್ತುತ್ತಿರುವಾಗ ಕುಸಿದು ಬಿದ್ದಿದ್ದಾನೆ. ತಕ್ಷಣ ಬಾಲಕನ ತಂದೆ ಕುಂದಾಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.
Advertisement. Scroll to continue reading.

ಮಣಿಪಾಲ ಆಸ್ಪತ್ರೆಗೆ ತೆರಳಿದ್ದು, ಅಲ್ಲಿನ ವೈಧ್ಯರು ಪ್ರಥ್ವಿರಾಜನನ್ನು ಪರೀಕ್ಷಿಸಿ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


































