ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ 4 ವಿಕೆಟ್ಗಳಿಂದ ನ್ಯೂಜಿಲೆಂಡ್ನ್ನು ಸೋಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 50 ಓವರ್ಗಳಲ್ಲಿ 273 ರನ್ಗಳಿಗೆ ಸರ್ವಪತನ ಕಂಡಿತು.
274 ರನ್ಗಳ ಸವಾಲಿನ ಗುರಿ ಬೆನ್ನಟ್ಟಿದ ಭಾರತ ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಅವರ ಭರ್ಜರಿ 95 ರನ್ಗಳ ಅರ್ಧಶತಕದ ಸಹಾಯದಿಂದ ಭಾರತ 48 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಗೆಲುವಿನ ಗುರಿ ತಲುಪಿತು.

ಗೆಲುವಿನ ರೂವಾರಿಯಾದ ವಿರಾಟ್ ಕೊಹ್ಲಿ :
ಭಾರತ ತಂಡದ ಆರಂಭಿಕ ಬ್ಯಾಟರ್ಗಳಾದ ನಾಯಕ ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲ ವಿಕೆಟ್ಗೆ 71 ರನ್ಗಳ ಜೊತೆಯಾಟ ನೀಡಿತು.
ಶುಭ್ಮನ್ ಗಿಲ್ 26 ರನ್ ಗಳಿಸಿ ಔಟಾದರೆ, ರೋಹಿತ್ ಶರ್ಮಾ 40 ಎಸೆತಗಳಲ್ಲಿ 46 ರನ್ ಬಾರಿಸಿ ಔಟಾದರು.
ಈ ವೇಳೆ ಕ್ರೀಸ್ಗೆ ಬಂದ ವಿರಾಟ್ ಕೊಹ್ಲಿ ಕೊನೆಯವರೆಗೂ ಆಟವಾಡಿ 104 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್ಗಳ ಸಮೇತ 95 ರನ್ಗಳನ್ನು ಬಾರಿಸಿ ಗೆಲುವಿನ ರೂವಾರಿ ಎನಿಸಿದರು. ವಿರಾಟ್ ಕೊಹ್ಲಿ ಸಾಥ್ ನೀಡಿದ ಶ್ರೇಯಸ್ ಅಯ್ಯರ್ 29 ಎಸೆತಗಳಲ್ಲಿ 33 ರನ್ ಗಳಿಸಿದರು.

ಕೆಎಲ್ ರಾಹುಲ್ ಕೂಡ 35 ಎಸೆತಗಳಲ್ಲಿ 27 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ 2 ರನ್ ಗಳಿಸಿ ರನೌಟ್ ಆದರು. ಆಲ್ರೌಂಡರ್ ರವೀಂದ್ರ ಜಡೇಜಾ 44 ಎಸೆತಗಳಲ್ಲಿ ಅಜೇಯ 39 ರನ್ ಗಳಿಸಿದರು.

































