ಗಾಂಧಿನಗರ : ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೂರತ್‍ನಲ್ಲಿ ನಡೆದಿದೆ.
ಆರು ಮಂದಿ ವಿಷಕಾರಿ ಪದಾರ್ಥ ಸೇವಿಸಿ ಸಾವನ್ನಪ್ಪಿದ್ದು, ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ನೇಣು ಬಿಗಿದುಕೊಂಡು ಮೃತಪಟ್ಟ ವ್ಯಕ್ತಿಯನ್ನು ಮನೀಶ್ ಸೋಲಂಕಿ ಎಂದು ಗುರುತಿಸಲಾಗಿದೆ. ಆತನ ಪತ್ನಿ ರೀಟಾ, ತಂದೆ ಕಾನು, ತಾಯಿ ಶೋಭಾ ಮತ್ತು ಮೂವರು ಮಕ್ಕಳನ್ನು ದಿಶಾ, ಕಾವ್ಯ ಮತ್ತು ಕುಶಾಲ್ ಉಳಿದವರು.

ಸೋಲಂಕಿ ಪೀಠೋಪಕರಣ ವ್ಯಾಪಾರ ನಡೆಸುತ್ತಿದ್ದ. ಅವರೊಂದಿಗೆ ಸುಮಾರು 35 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಇಂದು ಬೆಳಿಗ್ಗೆ ಅವರ ಉದ್ಯೋಗಿಗಳು ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಕರೆ ಸ್ವೀಕರಿಸದೇ ಇರುವುದು ಮತ್ತು ಮನೆಯ ಬಾಗಿಲು ತೆರೆಯದಿದ್ದಾಗ ಅನುಮಾನ ಬಂದು ಸ್ಥಳೀಯರು ಕಿಟಕಿಯನ್ನು ಒಡೆದು ಒಳಗೆ ಪ್ರವೇಶಿಸಿದ್ದಾರೆ. ಈ ವೇಳೆ ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಮನೆಯಲ್ಲಿ ಡೆತ್‍ನೋಟ್ ಸಹ ಪತ್ತೆಯಾಗಿದೆ. ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸೋಲಂಕಿ ಆರ್ಥಿಕ ಸಮಸ್ಯೆಯಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.



































