Connect with us

Hi, what are you looking for?

Diksoochi News

ರಾಷ್ಟ್ರೀಯ

20 ಕೋಟಿ ಕೊಡಿ, ಇಲ್ಲವಾದರೆ ಕೊಲೆ ಮಾಡ್ತೀವಿ: ಮುಕೇಶ್ ಅಂಬಾನಿಗೆ ಬೆದರಿಕೆ

1

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರಿಗೆ ಕೊಲೆ ಬೆದರಿಕೆಯೊಂದು ಬಂದಿರುವ ಬಗ್ಗೆ ವರದಿಯಾಗಿದೆ.

ಇಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ. 20 ಕೋಟಿ ಕೊಡಬೇಕು ಎಂಬುದಾಗಿ ಬೇಡಿಕೆ ಇಟ್ಟಿದ್ದಾನೆ. ನೀವು ನಮಗೆ 20 ಕೋಟಿ ರೂಪಾಯಿ ನೀಡದಿದ್ದರೆ, ನಾವು ನಿಮ್ಮನ್ನು ಕೊಲ್ಲುತ್ತೇವೆ. ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್‌ಗಳನ್ನು ಹೊಂದಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾನೆ.

ಅಕ್ಟೋಬರ್ 27 ರಂದು ಶಾದಾಬ್ ಖಾನ್ ಎಂಬ ಹೆಸರಿನಿಂದ ಈ ಬೆದರಿಕೆ ಮೇಲ್ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಅಂಬಾನಿ ನಿವಾಸ ಆಂಟಿಲಿಯಾದಲ್ಲಿ ಭದ್ರತಾ ಅಧಿಕಾರಿಗಳ ಗಮನಕ್ಕೆ ಬಂದ ನಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಸದ್ಯ ತನಿಖೆ ಮುಂದುವರಿದಿದೆ.

Advertisement. Scroll to continue reading.

ಕಳೆದ ವರ್ಷ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರನ್ನು ಗುರಿಯಾಗಿಸಿಕೊಂಡು ಅನಾಮಧೇಯ ಕರೆಗಳನ್ನು ಮಾಡಿದ್ದಕ್ಕಾಗಿ ಬಿಹಾರದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ದಕ್ಷಿಣ ಮುಂಬೈನಲ್ಲಿರುವ ಅಂಬಾನಿ ಕುಟುಂಬದ ನಿವಾಸ ಆಂಟಿಲಿಯಾದ ಜೊತೆಗೆ ಎಚ್‍ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿತ್ತು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!