ಬೆಂಗಳೂರು: ವೀರಭದ್ರ ನಗರದಲ್ಲಿ ಅಗ್ನಿ ದುರಂತ ಸಂಭವಿಸಿದೆ. ಹಲವು ಖಾಸಗಿ ಬಸ್ ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ. ವೀರಭದ್ರನಗರದ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಈ ಬೆಂಕಿ ವರ್ಕ್ ಶಾಪ್ನಲ್ಲಿ ಇತರೆ ವಾಹನಗಳಿಗೆ ಬೆಂಕಿ ವ್ಯಾಪಿಸುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದೆ. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಪ್ರಾಣ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.
ಸದ್ಯ ಆರು ಬಸ್ ಗಳಿಗೆ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದೆ.
Advertisement. Scroll to continue reading.

#WATCH | Private buses parked in a bus depot in Bengaluru's Veerabhadranagar catch fire
Detailed awaited. pic.twitter.com/gC0WAmksCZ— ANI (@ANI) October 30, 2023


































