ಬೆಂಗಳೂರು : ಸಂಸದ ಬಿ.ವೈ ರಾಘವೇಂದ್ರ ರವರು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ಗಂಗೊಳ್ಳಿಯಲ್ಲಿ ನವೆಂಬರ್ 13 ರಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 8 ದೋಣಿಗಳು ಸಂಪೂರ್ಣ ಹಾನಿಯಾಗಿದ್ದು, 2 ದೋಣಿಗಳು ಭಾಗಶಃ ಹಾನಿ, 2 ಡಿಂಗಿ ಹಾಗೂ ಮೀನುಗಾರಿಕೆ ಬಲೆ ಹಾನಿಯಾಗಿದೆ. ಈ ಅವಘಡದಿಂದ ಮೀನುಗಾರರು ಆಘಾತವಾಗಿದೆ.
ಈಗಾಗಲೇ ತೂಫಾನ್, ಚಂಡಮಾರುತ ಹಾಗೂ ಇನ್ನಿತರೆ ಕಾರಣಗಳಿಂದ ಮೀನುಗಾರಿಕೆ ನಡೆಸದೆ ಆರ್ಥಿಕವಾಗಿ ನಷ್ಟ ಅನುಭವಿಸಿ ತೊಂದರೆಗೆ ಒಳಗಾಗಿದ್ದಾರೆ. ಆದ್ದರಿಂದ ಪ್ರಸ್ತುತ ಅಗ್ನಿ ಅವಘಡದಲ್ಲಿ ಹಾನಿಗೊಳಗಾದ ದೋಣಿಗಳಿಗೆ ರೂ 10.00 ಕೋಟಿ ಪರಿಹಾರವನ್ನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು.
Advertisement. Scroll to continue reading.

In this article:b y Raghavendra, b y vijayendra, cm siddaramaiyya, deepak shetty, Diksoochi news, fire, Gangolli, gururaj shetty gantiholu
Click to comment

































