Connect with us

Hi, what are you looking for?

Diksoochi News

ರಾಜ್ಯ

ಟ್ರ್ಯಾಕ್ಟರ್ – ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ

1

ದಾವಣಗೆರೆ : ಕಾರು ಹಾಗೂ ಟ್ರ್ಯಾಕ್ಟರ್ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರಮಗೊಂಡನಹಳ್ಳಿಯಲ್ಲಿ ನಡೆದಿದೆ.

ಅತಿವೇಗವಾಗಿ ಬಂದಂತ ಕಾರು, ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಈ ದುರ್ಘಟನೆ ನಡೆದಿದೆ.

ಇನ್ನೂ 7 ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಎಸ್ ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

Advertisement. Scroll to continue reading.

ಮೃತರು ಹಾವೇರಿ ಮೂಲದವರು ಎಂದು ಹೇಳಲಾಗಿದೆ. ಬೆಂಗಳೂರು ಕಡೆಯಿಂದ ಹಾವೇರಿಗೆ ಹೋಗುತ್ತಿದ್ದಂತ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ದಾವಣಗೆರೆಯ ವಿದ್ಯಾನಗರ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!