Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಅಪ್ರೆಂಟಿಸ್‌ಶಿಪ್ ತರಬೇತಿ; ಅರ್ಜಿ ಆಹ್ವಾನ

0

 ಉಡುಪಿ : ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್, ಟೆಕ್ನಿಕಲ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್, ಬೆಂಗಳೂರು ತರಬೇತಿ ಸಂಸ್ಥೆಯಲ್ಲಿ ಅಪ್ರೆಂಟಿಸ್‌ಶಿಪ್ ಕಾಯ್ದೆ ಅಡಿಯಲ್ಲಿ ಸಿ.ಎನ್.ಸಿ ಪ್ರೋಗ್ರಾಮರ್ ಕಮ್ ಅಪರೇಟರ್, ಎಲೆಕ್ಟ್ರಿಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಟ್ರೇಡ್‌ನಲ್ಲಿ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

  ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು ಶೇ.60 ಮತ್ತು ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳು ಶೇ.50 ಅಂಕಗಳೊಂದಿಗೆ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ.

Advertisement. Scroll to continue reading.

ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು, ವಿವರಗಳನ್ನು ಭರ್ತಿಮಾಡಿ ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಪ್ರಮಾಣಪತ್ರ, ಇತ್ತೀಚಿನ ಭಾವಚಿತ್ರ, ಆಧಾರ್ ಕಾರ್ಡು, ಜಾತಿ ಪ್ರಮಾಣಪತ್ರ, ಉದ್ಯೋಗ ವಿನಿಮಯ ಕಛೇರಿಯಿಂದ ನೀಡಲ್ಪಟ್ಟ ಎಂಪ್ಲಾಯ್‌ಮೆಂಟ್ ಕಾರ್ಡಿನ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ, ಡಿಸೆಂಬರ್ 28 ರ ಒಳಗಾಗಿ ಸಲ್ಲಿಸಬಹುದಾಗಿದೆ. 

ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಉಡುಪಿ ದೂರವಾಣಿ ಸಂಖ್ಯೆ: 0820-2574869 ಹಾಗೂ ಮೊ.ನಂ: 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!