ಬೆಂಗಳೂರು : ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದೆ. ಸೋಮವಾರ (ಡಿ.11)ರ ರಾತ್ರಿ 11.30ಕ್ಕೆ ಬೆದರಿಕೆ ಕರೆ ಬಂದಿದ್ದು, ಪೊಲೀಸರು ತಕ್ಷಣ ರಾಜಭವನದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದೆ.
ಇನ್ನು ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಧಾನಸೌಧ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ.
ಕಳೆದ ವಾರ ರಾಜಧಾನಿ ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು.
Advertisement. Scroll to continue reading.