ಸಾಹಸಸಿಂಹ ಡಾ. ವಿಷ್ಣುವರ್ಧನ್ ಪತ್ನಿ, ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಆರೋಗ್ಯದಲ್ಲಿ ಏರುಪೇರಾಗಿದೆ. ಭಾರತಿ ವಿಷ್ಣುವರ್ಧನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಅಳಿಯ ಅನಿರುದ್ಧ್ ಮಾಹಿತಿ ನೀಡಿರುವ ಬಗ್ಗೆ ವರದಿಯಾಗಿದೆ.
ಇದೀಗ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರಿಗೆ ಅನಾರೋಗ್ಯ ಉಂಟಾಗಿರುವ ಸುದ್ದಿ ಕೇಳಿ ಅಭಿಮಾನಿಗಳಿಗೆ ಆಘಾತವಾಗಿದೆ.
ಭಾರತಿ ವಿಷ್ಣುವರ್ಧನ್ ಅವರು ಮಂಡಿ ನೋವಿನಿಂದ ಹಾಸಿಗೆ ಹಿಡಿದಿದ್ದಾರೆ ಎಂದು ವರದಿಯೊಂದರಲ್ಲಿ ಹೇಳಲಾಗಿದೆ.

ಕೆಲ ದಿನಗಳಿಂದ ಭಾರತೀ ವಿಷ್ಣುವರ್ಧನ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. 2 ತಿಂಗಳಿಂದ ಅವರು ಎಲ್ಲಿಗೂ ಹೋಗಿಲ್ಲ. ಮನೆಯಲ್ಲಿಯೇ ಬೆಡ್ ರೆಸ್ಟ್ ತೆಗೆದುಕೊಳ್ತಿದ್ದಾರೆ ಎಂದು ಅನಿರುದ್ಧ್ ಹೇಳಿರುವ ಬಗ್ಗೆ ವರದಿಯಾಗಿದೆ.
ವಯೋಸಹಜ ಸಮಸ್ಯೆಗಳಿಂದ ನಟಿ ಭಾರತಿ ವಿಷ್ಣುವರ್ಧನ್ ಬಳಲುತ್ತಿದ್ದಾರೆ. ಎಲ್ಲರ ಹಾರೈಕೆಯಿಂದ ಬೇಗ ಗುಣ ಮುಖರಾಗ್ತಾರೆ ಎನ್ನುವ ನಂಬಿಕೆ ನಮಗಿದೆ ಎಂದು ಅನುರುದ್ಧ್ ಹೇಳಿದ್ದಾರೆ.
ಭಾರತಿ ವಿಷ್ಣುವರ್ಧನ್ ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಡಾ. ರಾಜ್ ಕುಮಾರ್, ಡಾ. ವಿಷ್ಣುವರ್ಧನ್ ಸೇರಿದಂತೆ ಹಲವು ನಟರ ಜೊತೆ ನಟಿಸಿದ್ದಾರೆ. ಬರೀ 8 ವರ್ಷದಲ್ಲಿ ಅವರು 100 ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಮನೆಮಾತಾಗುದ್ದರು. ಅಭಿನಯ, ಸೌಂದರ್ಯದ ಮೂಲಕ ಭಾರತಿ ವಿಷ್ಣುವರ್ಧನ್ ಜನಪ್ರಿಯರಾಗಿದ್ದರು.


































