ಶಿರ್ವ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿರುವ ಘಟನೆ ಶಿರ್ವದಲ್ಲಿ ನಡೆದಿದೆ.
ಐವನ್ ಕೋರ್ಡಾ(55) ಮೃತ ವ್ಯಕ್ತಿ.
ಐವನ್ ಅವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಅವರನ್ನು ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.
Advertisement. Scroll to continue reading.
ಇನ್ನು ಡಿಕ್ಕಿ ಹೊಡೆದ ಸವಾರ, ವಾಹನ ಸಹಿತ ಪರಾರಿಯಾಗಿದ್ದಾನೆ. ಆತನ ಅಜಾಗರೂಕತೆ ಹಾಗೂ ನಿರ್ಲಕ್ಷತನದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.