ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ಲಾಲ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಬಳಿಕ ಭಜನ್ಲಾಲ್ ಶರ್ಮಾ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ನಿರ್ಧರಿಸಿತ್ತು.
ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರನ್ನು ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಅವರೂ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಪ್ರಮಾಣ ವಚನ ಸ್ವೀಕಾರಕ್ಕೂ ಮೊದಲು ಭಜನ್ ಲಾಲ್ ಅವರು ನಿವಾಸಕ್ಕೆ ತೆರಳಿ ತಂದೆ – ತಾಯಿಗಳ ಆಶೀರ್ವಾದ ಪಡೆದರು. ಜತೆಗೆ ಜೈಪುರದ ದೇವಸ್ಥಾನವೊಂದಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಏಕನಾಥ್ ಶಿಂಧೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ರಾಜಸ್ಥಾನ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
#WATCH | Goa CM Pramod Sawant, Tripura CM Manik Saha, Maharashtra CM Eknath Shinde, Gujarat CM Bhupendra Patel and Uttarakhand CM Pushkar Singh Dhami and other leaders attend the swearing-in ceremony of Rajasthan CM-designate Bhajanlal Sharma, in Jaipur pic.twitter.com/QsDgFBXJIa— ANI (@ANI) December 15, 2023



































