ಉತ್ತರಪ್ರದೇಶ : ಜ್ಞಾನವಾಪಿ ಮಸೀದಿಭೂ ವಿವಾದಕ್ಕೆ ಸಂಬಂಧಪಟ್ಟಂತೆ ಮತ್ತೊಮ್ಮೆ ಹಿಂದೂ ಸಮುದಾಯಕ್ಕೆ ಗೆಲುವು ಸಿಕ್ಕಿದೆ. ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಮರುಸ್ಥಾಪಿಸುವ ಬಗ್ಗೆ ಹಿಂದೂ ಸಮುದಾಯ ಸಲ್ಲಿಸಿದ ಅರ್ಜಿಯನ್ನು ಹಾಗೂ ಬಾಕಿ ಉಳಿದಿರುವ ಸಿವಿಲ್ ಮೊಕದ್ದಮೆಯ ನಿರ್ವಹಣೆಯನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಮತ್ತು ಯುಪಿ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಸಲ್ಲಿಸಿದ 5 ಅರ್ಜಿಗಳನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.
ರಾಷ್ಟ್ರೀಯ ಪ್ರಾಮುಖ್ಯತೆ ಹಾಗೂ 1991 ಕಾಯಿದೆ ಅನುಸಾರವಾಗಿ ಧಾರ್ಮಿಕ ಆರಾಧನೆಗಳನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ಈಗಾಗಲೇ ಈ ಬಗ್ಗೆ ಕಾನೂನತ್ಮಕವಾಗಿ ತನಿಖೆ ಹಾಗೂ ವಿಚಾರಣೆಗಳು ನಡೆಯುತ್ತಿದೆ. ಜ್ಞಾನವಾಪಿ ಮಸೀದಿಯ ಸಮಗ್ರ ಸಮೀಕ್ಷೆಯನ್ನು ನಡೆಸಲು ಏಪ್ರಿಲ್ 8, 2021 ರ ವಾರಣಾಸಿ ನ್ಯಾಯಾಲಯದ ಆದೇಶ ನೀಡಿತ್ತು. ಇದನ್ನು ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿ (ಎಐಎಂಸಿ) ಮತ್ತು ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಪ್ರಶ್ನಿಸಿತ್ತು.
Advertisement. Scroll to continue reading.



































