ಚಿಕ್ಕಮಗಳೂರು : ಹೃದಯಾಘಾತದಿಂದ 7ನೇ ತರಗತಿ ಓದುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದ ಸೃಷ್ಠಿ(13) ಮೃತ ವಿದ್ಯಾರ್ಥಿನಿ. ಈಕೆ ಶಾಲೆಗೆ ತೆರಳುತ್ತಿದ್ದಂತ ಸಂದರ್ಭದಲ್ಲಿ, ದಿಢೀರ್ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾಳೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.
Advertisement. Scroll to continue reading.

ಮೂಡಿಗೆರೆಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯೋ ವೇಳೆಗಾಗಲೇ ವಿದ್ಯಾರ್ಥಿನಿ ಸೃಷ್ಠಿ ಸಾವನ್ನಪ್ಪಿದ್ದರು. ಶವ ಪರೀಕ್ಷೆ ನಡೆಸಿದಂತ ವೈದ್ಯರು, ಆಕೆ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಮೃತ ವಿದ್ಯಾರ್ಥಿನಿ ದಾರದಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.
In this article:Chikkamagaluru, heart attack, jogannakere, moodigere, student death
Click to comment

































