ಗಂಗೊಳ್ಳಿ : ಸಮುದ್ರಕ್ಕೆ ಮೀನುಗಾರ ಬಿದ್ದು ಸಾವನ್ನಪ್ಪಿರುವ ಘಟನೆ ಮರವಂತೆಯಲ್ಲಿ ಶನಿವಾರ ನಡೆದಿದೆ. ಶಂಕರ (೬೨) ಮೃತ ಮೀನುಗಾರ.
ಶಂಕರ ಮೀನುಗಾರಿಕೆ ವೃತ್ತಿ ಮಾಡಿಕೊಂಡಿದ್ದು, ಮರವಂತೆಯ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಕಾಲುಜಾರಿ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದಾರೆ.
ಸಮುದ್ರದ ನೀರಿನಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪರೀಕ್ಷಿಸಿದ ವೈದ್ಯರು ಶಂಕರ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
Advertisement. Scroll to continue reading.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.