ಬೀದರ್: ಯುವ ಪ್ರೇಮಿಗಳಿಬ್ಬರು ನೇಣಿಗೆ ಶರಣಾದ ಘಟನೆ ಶನಿವಾರ ಸಿರ್ಸಿ(ಎ) ಗ್ರಾಮದಲ್ಲಿ ನಡೆದಿದೆ.
ಧನರಾಜ್ ರಾಮಣ್ಣ (25)ಹಾಗೂ ಭಾಗ್ಯಶ್ರೀ ವೈಜಿನಾಥ (19) ಅತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ಇಬ್ಬರು ಗ್ರಾಮದ ಹೊರವಲಯದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಸಮಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
Advertisement. Scroll to continue reading.
ಇಬ್ಬರೂ ಪ್ರೇಮಿಗಳು ಬೇರೆ-ಬೇರೆ ಸಮುದಾಯಕ್ಕೆ ಸೇರಿದವರಾಗಿದ್ದು, ಮದುವೆಗೆ ಪೋಷಕರು ಒಪ್ಪದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಅನುಮಾನಿಸಲಾಗಿದೆ.
ಈ ಬಗ್ಗೆ ಬಗದಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.