ಬೆಂಗಳೂರು : ರಾಜ್ಯದಲ್ಲಿ ಇಂದು 106 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 344ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 95, ಚಾಮರಾಜನಗರ ಜಿಲ್ಲೆಯಲ್ಲಿ ಒಬ್ಬರಿಗೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರಿಗೆ, ಮಂಡ್ಯ 1, ಶಿವಮೊಗ್ಗ 1 ಸೇರಿದಂತೆ 106 ಜನರಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 344ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಇಂದು ಸೋಂಕಿತರಾದಂತ 33 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 344 ಮಂದಿಯಲ್ಲಿ 323 ಜನರನ್ನು ಹೋಂ ಐಸೋಲೇಷನ್ ನಲ್ಲಿ ಇರಿಸಲಾಗಿದೆ.
Advertisement. Scroll to continue reading.

21 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 7 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸೋಲೇಷನ್ ಆಸ್ಪತ್ರೆಯಲ್ಲಿ 14 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಜ್ಯ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.


































