Connect with us

Hi, what are you looking for?

Diksoochi News

ಕರಾವಳಿ

ಕರ್ನಾಟಕ ವಿಧಾನಪರಿಷತ್ ವಿಪಕ್ಷನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

1

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ವಿಧಾನ ಪರಿಷತ್ ವಿಪಕ್ಷ ನಾಯಕರನ್ನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ ಮಾಡಲಾಗಿದೆ. ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕರನ್ನಾಗಿ ಅರವಿಂದ್ ಬೆಲ್ಲದ್ ನೇಮಕ ಮಾಡಲಾಗಿದೆ.

ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದಂತ ಜೆಪಿ ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿವಿಧ ಜವಾಬ್ದಾರಿಗಳಿಗೆ ನಿಯುಕ್ತಿಗೊಳಿಸಲಾಗಿದೆ ಎಂದಿದ್ದಾರೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ, ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ ಹಾಗೂ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ನೇಮಕ ಮಾಡಲಾಗಿದೆ.

Advertisement. Scroll to continue reading.

ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಅರವಿಂದ್ ಬೆಲ್ಲದ್, ಮುಖ್ಯ ಸಚೇತಕರಾಗಿ ದೊಡ್ಡನಗೌಡ ಜಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!