ಬೆಂಗಳೂರು : ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚುಂಚಘಟ್ಟ ನಿವಾಸಿ ಮಂಜುನಾಥ್(52) ಹಾಗೂ ಕಾರು ಚಾಲಕ ಇಬ್ಬರು ಸಾವನ್ನಪ್ಪಿದ್ದಾರೆ.
ಮಂಜುನಾಥ್ ಪತ್ನಿ ಹೇಮಲತಾ, ಮಗಳು ಕೃತಿಕಾ(20), ಮಗ ಪ್ರಜ್ವಲ್(14) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿಲಾಗಿದೆ.
Advertisement. Scroll to continue reading.
ಲಾರಿಯ ಹಿಂಬದಿಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಅಪಘಾತ ಬಳಿಕ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.