Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ರಾಜ್ಯ ಮಟ್ಟದ ಪ್ರಬಂಧ ಹಾಗೂ ಭಿತ್ತಿ ಚಿತ್ರ ರಚನೆ ಸ್ಪರ್ಧೆ

0

ಉಡುಪಿ : ರಾಷ್ಟಿçÃಯ ಮತದಾರರ ದಿನಾಚರಣೆ -2024 ರ ಅಂಗವಾಗಿ ರಾಜ್ಯ ಮಟ್ಟದ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರತ್ಯೇಕವಾಗಿ ಪ್ರಬಂಧ ಸ್ಪರ್ಧೆ ಹಾಗೂ ಭಿತ್ತಿ ಚಿತ್ರ ರಚನೆ ಸ್ಪರ್ಧೆಗಳನ್ನು ಡಿಸೆಂಬರ್ 28 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30 ರ ವರೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯ K-SWAN ವೀಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ಆಯೋಜಿಸಲಾಗುತ್ತಿದೆ.

  ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಪ್ರೌಢಶಾಲೆ, ಪದವಿ ಪೂರ್ವ/ ಪಾಲಿಟೆಕ್ನಿಕ್/ ತತ್ಸಮಾನ ಹಾಗೂ ಪದವಿ/ ತಾಂತ್ರಿಕ/ ವೈದ್ಯಕೀಯ ಕಾಲೇಜು/ ಸ್ನಾತಕೋತ್ತರ ಕೇಂದ್ರದ ಈ ಮೂರು ವಿಭಾಗಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ವಿಜೇತರಿಗೆ ರಾಷ್ಟಿçÃಯ ಮತದಾರರ ದಿನಾಚರಣೆ -2024 ರ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಪ್ರಮಾಣಪತ್ರದೊಂದಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು.

  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಥವಾ ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.  

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!