ಟೋಕಿಯೊದ ಹನೆಡಾ ವಿಮಾನ ನಿಲ್ದಾಣದಲ್ಲಿ ಜಪಾನ್ ಏರ್ಲೈನ್ಸ್ ವಿಮಾನವೊಂದು ಬೆಂಕಿಗೆ ಆಹುತಿಯಾಗಿದೆ. ರನ್ವೇಯಲ್ಲಿ ವಿಮಾನ ಚಲಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ವಿಮಾನದಲ್ಲಿ 367 ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ
ಮತ್ತೊಂದು ವಿಮಾನಕ್ಕೆ ಡಿಕ್ಕಿ ಹೊಡೆದ ನಂತರ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ ಎಂದು ಹೇಳಲಾಗುತ್ತಿದೆ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ವಿಮಾನದ ಕಿಟಕಿಗಳಿಂದ ಜ್ವಾಲೆಗಳು ಹೊರಬರುವುದನ್ನು ಕಾಣಬಹುದು.
ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿಯಾದ ನಂತರ ಜಪಾನ್ ಏರ್ಲೈನ್ಸ್ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಾಗ ಅದರಲ್ಲಿ 350 ಮಂದಿ ಇದ್ದರು.

ವಿಮಾನದಲ್ಲಿದ್ದ ಎಲ್ಲ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇಂತಹ ಸಂದರ್ಭದಲ್ಲಿ ಭಾರೀ ಅನಾಹುತ ತಪ್ಪಿದೆ. ಸದ್ಯ ಬೆಂಕಿಯನ್ನು ನಂದಿಸುವ ಪ್ರಯತ್ನ ನಡೆಯುತ್ತಿದೆ ಎಂದು ವರದಿಯಾಗಿದೆ.
Just IN:— A Japan Airlines plane with 367 people on board has collided with another plane at Tokyo Airport.
— In the video, plane can be seen on massive fire. Fate of 367 passengers onboard is yet unclear. pic.twitter.com/GNgx7y1aHr— South Asia Index (@SouthAsiaIndex) January 2, 2024