Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ದಕ್ಷಿಣ ಕೊರಿಯಾದ ವಿಪಕ್ಷ ನಾಯಕನ ಕುತ್ತಿಗೆಗೆ ಚಾಕು ಇರಿತ

1

ಸಿಯೋಲ್: ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ವೇಳೆ ದಕ್ಷಿಣ ಕೊರಿಯಾದ ವಿರೋಧ ನಾಯಕ ಲೀ ಜೇ-ಮ್ಯುಂಗ್‌ (59) ಅವರ ಕುತ್ತಿಗೆಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.

ಹೊಸ ವಿಮಾನ ನಿಲ್ದಾಣದ ಸ್ಥಳಕ್ಕೆ ಭೇಟಿ ನೀಡಿದ ನಂತರ ಪತ್ರಕರ್ತರ ಗುಂಪಿನಲ್ಲಿ ಲೀ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಅವರ ಕುತ್ತಿಗೆಗೆ ಇರಿದಿದ್ದಾನೆ.

ಹಲ್ಲೆ ನಡೆಸಿರುವ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸದ್ಯ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

Advertisement. Scroll to continue reading.

ಜನರು ವಿಪಕ್ಷ ನಾಯಕರ ಸಹಾಯಕ್ಕೆ ಧಾವಿಸುತ್ತಿದ್ದಂತೆ ನೆಲಕ್ಕೆ ಕುಸಿದು ಬೀಳುತ್ತಿರುವುದು ವೀಡಿಯೋದಲ್ಲಿ ಕಂಡುಬಂದಿದೆ. ಹಲ್ಲೆಗೊಳಗಾಗಿ ಕುಸಿದು ಬಿದ್ದ ವಿಪಕ್ಷ ನಾಯಕನ ಕುತ್ತಿಗೆಯ ಮೇಲೆ ಕರವಸ್ತ್ರ ಒತ್ತಿ ರಕ್ತ ಸೋರುವುದಕ್ಕೆ ತಡೆಗಟ್ಟಲು ಪ್ರಯತ್ನಿಸಿದ್ದಾರೆ.

ತಕ್ಷಣ ಮ್ಯುಂಗ್‌ ಅವರನ್ನು ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅವರನ್ನು ಪುಸಾನ್ ನ್ಯಾಷನಲ್ ಯೂನಿವರ್ಸಿಟಿ ಆಸ್ಪತ್ರೆಗೆ ಸಾಗಿಸಿದಾಗ ಅವರು ಪ್ರಜ್ಞೆ ಹೊಂದಿದ್ದರು ಎಂದು ಸಂಸ್ಥೆ ಹೇಳಿದೆ. ಪೊಲೀಸ್‌ ಅಧಿಕಾರಿಗಳು ದಾಳಿ ಕೋರನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!