ಗುರುಪುರ : ಖಾಸಗಿ ಬಸ್ ಪಲ್ಟಿಯಾಗಿ, ಹಲವರು ಗಾಯಗೊಂಡಿರುವ ಘಟನೆ ಗುರುಪುರ ಕೈಕಂಬ ಬಳಿ ಮಂಗಳವಾರ ಸಂಜೆ ನಡೆದಿದೆ.
ಕಟೀಲಿನಿಂದ ಬಿ.ಸಿ.ರೋಡ್ಗೆ ತೆರಳುತ್ತಿದ್ದ ಖಾಸಗಿ ಬಸ್ ಗುರುಪುರ ಕೈಕಂಬದ ಬಳಿ ಪೊಳಲಿ ದ್ವಾರದ ಇಳಿಜಾರು ರಸ್ತೆಯಲ್ಲಿ ಪಲ್ಟಿಯಾಗಿದೆ. ಪರಿಣಾಮ ಹಲವರಿಗೆ ಗಾಯಗಳಾಗಿವೆ.

ಸಂಜೆ ವೇಳೆಯಾಗಿದ್ದರಿಂದ ಬಸ್ನಲ್ಲಿ ಪೂರ್ತಿ ಪ್ರಯಾಣಿಕರಿದ್ದು ಪೊಳಲಿ ದ್ವಾರದ ಬಳಿ ಜನರನ್ನು ಹತ್ತಿಸಿಕೊಳ್ಳಲು ನಿಂತಿತ್ತು. ಆದರೆ ಇಳಿಜಾರು ಪ್ರದೇಶದಲ್ಲಿ ಒಮ್ಮೆಲೆ ಬಸ್ ಚಲಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ.
ಬಸ್ ಪಲ್ಟಿಯಾದ ವಿಷಯ ತಿಳಿದಂತ ಸ್ಥಳೀಯರು, ಬಸ್ಸಿನಲ್ಲಿ ಸಿಲುಕಿದ್ದಂತ ಪ್ರಯಾಣಿಕರನ್ನು ರಕ್ಷಣೆ ಮಾಡಿ, ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಪಲ್ಟಿಯಾಗಿರುವಂತ ಖಾಸಗಿ ಬಸ್ ನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎಂಬುದಾಗಿ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿದ್ದಾರೆ. ಇನ್ನು ಕ್ರೇನ್ ಮೂಲಕ ಬಸ್ನ್ನು ಮೇಲೆತ್ತಲಾಯಿತು ಎನ್ನಲಾಗಿದೆ.



































