ಉಡುಪಿ : ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಅನಿಲ್ ಕುಮಾರ್ ಅವರು ಕ್ಷೇತ್ರ ಸಮೀಕ್ಷೆ ಮಾಡಿ ರಚಿಸಿದ ‘ಉಡುಪಿ ಜಿಲ್ಲಾ ಬರಹಗಾರರ ಕೋಶ’ ಕೃತಿ ಬಿಡುಗಡೆ ಕಾರ್ಯಕ್ರಮ ಇದೇ ಜ.7ರಂದು ಭಾನುವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಕೃತಿಯನ್ನು ಹಂಪಿ ಕನ್ನಡ ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ. ಸುಬಣ್ಣ ರೈ ಬಿಡುಗಡೆಗೊಳಿಸಲಿದ್ದಾರೆ.
ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ವರದರಾಜ ಚಂದ್ರಗಿರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಡಾ.ಪಾದೇಕಲ್ಲು ವಿಷ್ಣು ಭಟ್ಟ ಕೃತಿಯನ್ನು ಪರಿಚಯಿ ಸಲಿದ್ದಾರೆ. ಎಂಜಿಎಂ ಕಾಲೇಜಿನ ಪ್ರಾಂಶುಪಾಲ್ ಪ್ರೊ.ಲಕ್ಷ್ಮೀನಾರಾಯಣ ಕಾರಂತ, ರವೀಂದ್ರ ರೈ ವಿಶೇಷ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಬಳಿಕ ಜಿಲ್ಲೆಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಒಟ್ಟು ಐದು ವಿಚಾರಗೋಷ್ಠಿಗಳು ನಡೆಯಲಿವೆ. ಸಂಜೆ 4:00ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ನಾಡೋಜ ಕೆ.ಪಿ.ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಯು. ಸೀತಾರಾಮ ಶೆಟ್ಟಿ ಹಾಗೂ ಕೆರಾಡಿ ಚಂದ್ರಶೇಖರ ಶೆಟ್ಟಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ.


































