ಕುಂದಾಪುರ : ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟಿರುವ ಘಟನೆ ಕುಂಭಾಶಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ನಡೆದಿದೆ.
ಪಾಂಡುರಂಗ ಮೃತ ಸವಾರ.
ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು, ಎದುರಿನಿಂದ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಪಾಂಡುರAಗ ಅವರಿಗೆ ಕೋಟೇಶ್ವರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು.
Advertisement. Scroll to continue reading.
ಆದರೆ, ಅಲ್ಲಿ ಪರೀಕ್ಷಿಸಿದ ವೈದ್ಯರು ಪಾಂಡುರAಗ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.