ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟಿçÃಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರ ಹುದ್ದೆಗೆ 21 ರಿಂದ 35 ವರ್ಷದೊಳಗಿನ ಯುವಕ-ಯುವತಿಯರಿಗೆ ಅರ್ಜಿ ಆಹ್ವಾನಿಸಲಾಗಿದೆ.
Advertisement. Scroll to continue reading.

ಪದವಿ ತೇರ್ಗಡೆ ಹೊಂದಿದ ಆಸಕ್ತ ಯುವಕ ಹಾಗೂ ಯುವತಿಯರು ಜನವರಿ 15 ರ ಸಂಜೆ 5 ಗಂಟೆಯ ಒಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರ ದೂ.ಸಂಖ್ಯೆ: 0820-2521324, ಮೊ.ನಂ:9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement. Scroll to continue reading.



































