Connect with us

Hi, what are you looking for?

Diksoochi News

ಕ್ರೀಡೆ

 ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ

1

2024 ರ ಜೂನ್ ನಲ್ಲಿ ನಡೆಯಲ್ಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ತಯಾರಿ ಶುರುವಾಗಿದೆ. ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಜಂಟಿಯಾಗಿ ಆತಿಥ್ಯ ವಹಿಸುತ್ತಿವೆ. ಈಗಾಗಲೇ 20 ತಂಡಗಳನ್ನು ಅಧಿಕೃತಗೊಳಿಸಲಾಗಿದೆ. ಈ ನಡುವೆ ಐಸಿಸಿ, ವೇಳಾಪಟ್ಟಿಯನ್ನು ಶುಕ್ರವಾರ ಬಿಡುಗಡೆಗೊಳಿಸಿದೆ.

ವೇಳಾಪಟ್ಟಿಯ ಪ್ರಕಾರ ಜೂನ್ 1 ರಿಂದ ಆರಂಭವಾಗಲಿರುವ ಟೂರ್ನಿ ಜೂನ್ 29 ರಂದು ಮುಕ್ತಾಯವಾಗಲಿದೆ.

ಟಿ20 ವಿಶ್ವಕಪ್‌ ಫೈನಲ್ ಪಂದ್ಯ ಜೂನ್ 29 ರಂದು ನಡೆಯಲಿದೆ. ಉದ್ಘಾಟನಾ ಪಂದ್ಯ ಆತಿಥೇಯ ಯುಎಸ್ಎ ಹಾಗೂ ಕೆನಡಾ ನಡುವೆ ನಡೆದರೆ, ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

Advertisement. Scroll to continue reading.

ಪಂದ್ಯ…ವಿವರ :

ಟೀಂ ಇಂಡಿಯಾ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಭಾರತವನ್ನು ಹೊರತುಪಡಿಸಿ ಪಾಕಿಸ್ತಾನ, ಐರ್ಲೆಂಡ್, ಕೆನಡಾ ಮತ್ತು ಆತಿಥೇಯ ಯುಎಸ್ಎ ಕೂಡ ಈ ಗುಂಪಿನಲ್ಲಿ ಸ್ಥಾನ ಪಡೆದಿವೆ.

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 05 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಈ ಪಂದ್ಯ ನ್ಯೂಯಾರ್ಕ್‌ನಲ್ಲಿ ನಡೆಯಲಿದೆ. ಈ ಪಂದ್ಯದ ನಂತರ, ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ವಿಶ್ವಕಪ್‌ನ ಅತಿದೊಡ್ಡ ಪಂದ್ಯ ನಡೆಯಲಿದೆ.

ಅಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.

Advertisement. Scroll to continue reading.

ಭಾರತ ತನ್ನ ಮೂರನೇ ಗುಂಪು ಹಂತದ ಪಂದ್ಯವನ್ನು ಅಮೆರಿಕ ವಿರುದ್ಧ ಜೂನ್ 12 ರಂದು ನ್ಯೂಯಾರ್ಕ್‌ನಲ್ಲಿ ಮತ್ತು ನಾಲ್ಕನೇ ಲೀಗ್ ಪಂದ್ಯವನ್ನು ಕೆನಡಾ ವಿರುದ್ಧ ಜೂನ್ 15 ರಂದು ಫ್ಲೋರಿಡಾದಲ್ಲಿ ಆಡಲಿದೆ.

ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಯುಎಸ್ಎನಲ್ಲೇ ಆಡಲಿದ್ದು, ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಯುಎಸ್‌ಎನಲ್ಲಿ ಆಡಲಿದೆ.

  1. ಜೂನ್ 5 – ಭಾರತ vs ಐರ್ಲೆಂಡ್, ನ್ಯೂಯಾರ್ಕ್
  2. ಜೂನ್ 9- ಭಾರತ vs ಪಾಕಿಸ್ತಾನ, ನ್ಯೂಯಾರ್ಕ್
  3. ಜೂನ್ 12- ಭಾರತ vs ಯುಎಸ್​ಎ, ನ್ಯೂಯಾರ್ಕ್
  4. ಜೂನ್ 15- ಭಾರತ vs ಕೆನಡಾ, ಫ್ಲೋರಿಡಾ

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!