ನವದೆಹಲಿ : ಮುಂಬರುವ ಭಾರತ ಮತ್ತು ಅಫ್ಘಾನಿಸ್ತಾನ ಟಿ 20 ಐ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಕಳೆದ ಒಂದು ವರ್ಷದಿಂದ ಟಿ20 ಕ್ರಿಕೆಟ್ನಿಂದ ದೂರ ಉಳಿದಿರುವ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ 20 ಗೆ ಮರಳಿದ್ದಾರೆ.
ಈ ಸರಣಿಯಲ್ಲಿ ಟೆಸ್ಟ್ ಸರಣಿಯಲ್ಲಿ ಮಿಂಚಿದ್ದ ಸ್ಟಾರ್ ಬೌಲರ್ಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಲಾಗಿದೆ.
ಕೆಎಲ್ ರಾಹುಲ್ರನ್ನು ಟಿ20 ಸರಣಿಗೆ ಆಯ್ಕೆ ಮಾಡಿಲ್ಲ.
ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್ಗೂ ಅವಕಾಶ ಸಿಕ್ಕಿಲ್ಲ.
ಭಾರತ ತಂಡ ಹೀಗಿದೆ?
Advertisement. Scroll to continue reading.

ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ಕೀಪರ್), ಸಂಜು ಸ್ಯಾಮ್ಸನ್ (ಕೀಪರ್), ಶಿವಂ ದುಬೆ, ವಾಸಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಷ್ದೀಪ್ ಸಿಂಗ್ , ಅವೇಶ್ ಖಾನ್, ಮುಖೇಶ್ ಕುಮಾರ್
In this article:Diksoochi news, Ind vs Afghanistan, KL Rahul, kohli, Rohith sharma, T20

Click to comment