ಕೋಲಾರ : ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಮುಳಬಾಗಿಲಿನಲ್ಲಿ ಶ್ರೀರಾಮನ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಆದರೆ ಇದನ್ನು ಕೆಲ ಕಿಡಿಗೇಡಿಗಳು ಬ್ಲೇಡ್ ನಿಂದ ಕುಯ್ದಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ಶ್ರೀರಾಮನ ಫ್ಲೆಕ್ಸ್ ಹರಿದಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಈ ಸಂಬಂಧ ಮುಳಬಾಗಿಲು ಪೊಲೀಸರು ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸದ್ಯ ಪೊಲೀಸರು ಬಂಧಿತ ವ್ಯಕ್ತಿಗಳ ಹೆಸರನ್ನು ಇನ್ನೂ ಬಹಿರಂಗಪಡಿಸಿಲ್ಲ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
Advertisement. Scroll to continue reading.