ಶಿಮ್ಲಾ : ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್ ಹೇಳಿತ್ತು. ಇದೀಗ ತನ್ನದೇ ಪಕ್ಷದ ಸರ್ಕಾರ ಶಾಕ್ ನೀಡಿದ್ದು, ಜನವರಿ 22ರಂದು ರಜೆ ಘೋಷಣೆ ಮಾಡಿದೆ.
ಕಾಂಗ್ರೆಸ್ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶದಲ್ಲಿ ರಾಮಮಂದಿರ ಉದ್ಘಾಟನೆ ನಡೆಯಲಿರುವ ಸೋಮವಾರ ಸಾರ್ವಜನಿಕ ರಜೆ ಘೋಷಣೆ ಮಾಡಿದೆ.
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಭಾನುವಾರ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಸಮಾರಂಭದ ದೃಷ್ಟಿಯಿಂದ ಜನವರಿ 22 ರಂದು ಸಾರ್ವಜನಿಕ ರಜೆ ಘೋಷಿಸಿದ್ದಾರೆ.

ಇಂದು ಶಿಮ್ಲಾದ ರಾಮ ಮಂದಿರಕ್ಕೆ ಭೇಟಿ ನೀಡಿದ್ದ ಸಿಎಂ ಸುಖು ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಮಮಂದಿರ ಉದ್ಘಾಟನಾ ಸಮಯದಲ್ಲಿ ಮನೆಯಲ್ಲಿ ಮಣ್ಣಿನ ದೀಪಗಳನ್ನು ಬೆಳಗಿಸುವಂತೆ ರಾಜ್ಯದ ಜನತೆಗೆ ಮನವಿ ಮಾಡಿದರು.
ಭಗವಾನ್ ರಾಮನು ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ, ಅವರು ಪ್ರತಿಯೊಬ್ಬರ ಆದರ್ಶ ಮತ್ತು ದೇಶದ ಸಂಸ್ಕೃತಿ. "प्राण प्रतिष्ठा के दिन के संदर्भ में एक महत्वपूर्ण घोषणा"#RamMandirPranPratishta pic.twitter.com/MXSpnPQgjy— Sukhvinder Singh Sukhu (@SukhuSukhvinder) January 21, 2024
ನಾಳೆ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದೆ. ಆದರೆ ನಾವು ಪೂರ್ಣ ದಿನದ ರಜೆ ಘೋಷಿಸುತ್ತಿದ್ದೇವೆ. ನಾನು ನನ್ನ ಮನೆಯಲ್ಲಿ ದೀಪವನ್ನು ಬೆಳಗಿಸುತ್ತೇನೆ ಮತ್ತು ಅದೇ ರೀತಿ ಮಾಡಲು ಇತರರನ್ನು ಪ್ರೋತ್ಸಾಹಿಸುತ್ತೇನೆ. ನಾನು ಶೀಘ್ರದಲ್ಲೇ ಅಯೋಧ್ಯೆಯ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ. ಅಲ್ಲದೆ ಜಖುವಿನಲ್ಲಿ ರಾಮನ ಪ್ರತಿಮೆಯನ್ನು ನಿರ್ಮಿಸಲಾಗುವುದು ಎಂದು ಹೇಳಿದರು.


































