ಚಿತ್ರದುರ್ಗ: ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ದಾರುಣ ಘಟನೆ ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಭಾನುವಾರ ನಡೆದಿದೆ.
ಮೃತ ಮಹಿಳೆಯನ್ನು ಲಕ್ಷ್ಮಮ್ಮ(38) ಎಂದು ಗುರುತಿಸಲಾಗಿದೆ. ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿವೆ. ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪರಮೇಶ್ ಎಂಬುವವರ ಬೀದಿ ಬದಿ ಹೋಟೆಲ್‌ಗೆ ಬೆಂಕಿ ಬಿದ್ದಿದೆ. ಈ ವಿಚಾರ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿದ್ದ ಮಹಿಳಾ ಕಾರ್ಮಿಕರು ಹೋಟೆಲ್‌ನತ್ತ ಧಾವಿಸಿದ್ದಾರೆ. ಈ ವೇಳೆ ಹೋಟೆಲ್‌ನಲ್ಲಿದ್ದ ಸಿಲಿಂಡರ್ ಸ್ಪೋಟಗೊಂಡಿದೆ.
Advertisement. Scroll to continue reading.

ಸಿಲಿಂಡರ್ ಸ್ಪೋಟದಿಂದ ಸ್ಥಳದಲ್ಲಿದ್ದ ಮಹಿಳಾ ಕಾರ್ಮಿಕ ಲಕ್ಷ್ಮಮ್ಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಈ ಸಂಬಂಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.
