ಬೆಂಗಳೂರು : ಅತ್ತ ರಾಮನ ಆಗಮನದಿಂದ ದೇಶವೇ ಸಂಭ್ರಮ ಪಡುತ್ತಿದ್ದರೆ, ಇತ್ತ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.
ಧ್ರುವ ಸರ್ಜಾ ಫಾರ್ಮ್ ಹೌಸ್‌ನಲ್ಲಿ ನಾಮಕರಣ ಶಾಸ್ತ್ರ ನೆರವೇರಿದೆ. ಮಗಳಿಗೆ ರುದ್ರಾಕ್ಷಿ ಮತ್ತು ಮಗನಿಗೆ ಹಯಗ್ರೀವ ಎಂದು ನಾಮಕರಣ ಮಾಡಿದ್ದಾರೆ.
ಅಯೋಧ್ಯೆ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ವೇಳೆಯೇ ನಾಮಕರಣ ಶಾಸ್ತ್ರ ನಡೆದಿದ್ದು, ಮಕ್ಕಳಿಗೆ ವಿಶೇಷ ಮತ್ತು ಅರ್ಥಪೂರ್ಣವಾದ ಹೆಸರನ್ನೇ ಇಟ್ಟಿದ್ದಾರೆ.
Advertisement. Scroll to continue reading.

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಈ ಹಿಂದೆ ಮಗಳು ಜನಿಸಿದಾಗಲೇ ನಾಮಕರಣ ಯಾವಾಗ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಲೇ ಇದ್ದರು. ಈವೇಳೆ ಧ್ರುವ ಸರ್ಜಾ ಅವರು ಒಂದು ಸಮಯ ನೋಡಿ ನಾಮಕರಣ ಮಾಡುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದರು. ಇದೀಗ ಅಂತಿಮವಾಗಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನದಂತೆ ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.
In this article:chiranjeevi sarja, Dhruva Sarja, Diksoochi news, meghana raj, prerana, ramamandir, ramlalla

Click to comment