ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೊಸ ಪಿಂಚಣಿ ಯೋಜನೆ(ಎನ್ ಪಿಎಸ್)ಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.
ಈ ಕುರಿತು ಎಕ್ಸ್ ನಲ್ಲಿ ಆದೇಶದ ಪ್ರತಿಯನ್ನು ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,
2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.
ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿ ನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ.

ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ ಎಂದಿದ್ದಾರೆ.
2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.
ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ… pic.twitter.com/IJTzZACw2R— Siddaramaiah (@siddaramaiah) January 24, 2024

































