ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 52 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 341ಕ್ಕೆ ಇಳಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 12 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 52 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕೋವಿಡ್ನಿಂದ 60 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 3456 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 1.50 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿತರಲ್ಲಿ 312 ಮಂದಿ ಮನೆ ಆರೈಕೆಗೆ ಒಳಗಾದರೆ, 25 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರು ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
#COVID19 Media Bulletin – 26/01/2024 pic.twitter.com/CkDosASQfP— K'taka Health Dept (@DHFWKA) January 26, 2024