ಬಾಲಿವುಡ್ ಸ್ಟಾರ್ ನಟ ಧಮೇಂದ್ರ ಮತ್ತು ಹೇಮಾ ಮಾಲಿನಿ ಪುತ್ರಿ ಇಶಾ ಡಿಯೋಲ್ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಉದ್ಯಮಿ ಭರತ್ ತಖ್ತಾನಿ ಜೊತೆಗಿನ 12 ವರ್ಷಗಳ ವೈವಾಹಿಕ ಜೀವನಕ್ಕೆ ನಟಿ ಇಶಾ ಅಂತ್ಯ ಹಾಡಿದ್ದಾರೆ.

ವಿಚ್ಛೇದನದ ಬಗ್ಗೆ ಇಶಾ ಡಿಯೋಲ್- ಭರತ್ ತಖ್ತಾನಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.

ನಾವು ಪರಸ್ಪರ ಒಪ್ಪಿಗೆಯ ಮೇರೆಗೆ ಸೌಹಾರ್ದಯುತವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಜೀವನ ಬದಲಾಗುತ್ತಿರುವ ಈ ಸಮಯದಲ್ಲಿ ನಮ್ಮ ಇಬ್ಬರು ಮಕ್ಕಳ ಉತ್ತಮ ಹಿತಾಸಕ್ತಿ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮಹತ್ವದ್ದಾಗಿದೆ. ನಮ್ಮ ಗೌಪ್ಯತೆಯನ್ನ ಗೌರವಿಸುವುದನ್ನು ನಾವು ಪ್ರಶಂಸಿಸುತ್ತೇವೆ ಎಂದು ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ಜಂಟಿ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಕೆಲ ದಿನಗಳಿಂದ ಇಬ್ಬರ ಡಿವೋರ್ಸ್ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಈಗ ಅಧಿಕೃತ ಮಾಹಿತಿ ಹೊರಬಿದ್ದಿದೆ.

2012ರಲ್ಲಿ ಇಶಾ ಡಿಯೋಲ್- ಭರತ್ ತಖ್ತಾನಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2017ರಲ್ಲಿ ಮಗಳು ರಾಧ್ಯಗೆ ಇಶಾ ಡಿಯೋಲ್ ಜನ್ಮ ನೀಡಿದರು. 2019ರಲ್ಲಿ ಎರಡನೇ ಮಗುವಿಗೆ ಜನ್ಮ ನೀಡಿದ್ದರು. ಇದೀಗ 12 ವರ್ಷಗಳ ದಾಂಪತ್ಯ ಜೀವನಕ್ಕೆ ಇಶಾ ಡಿಯೋಲ್- ಭರತ್ ವಿದಾಯ ಹೇಳಿದ್ದಾರೆ.

ಧೂಮ್, ಜಸ್ಟ್ ಮ್ಯಾರೀಡ್, ನೋ ಎಂಟ್ರಿ, ಡಾರ್ಲಿಂಗ್, ಶಾದಿ ನಂ.1 ಸೇರಿದಂತೆ ಬಾಲಿವುಡ್ನ ಹಲವು ಸಿನಿಮಾಗಳಲ್ಲಿ ಇಶಾ ನಟಿಸಿದ್ದಾರೆ


































