ನವದೆಹಲಿ : ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣ ಭಾಂಡಗೆ ಅವಕಾಶ ನೀಡಲಾಗಿದೆ. ಈ ಮೂಲಕ ಮಾಜಿ ಸಚಿವ ವಿ.ಸೋಮಣ್ಣನವರಿಗೆ ಬಿಗ್ ಶಾಕ್ ಆಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ವಿ.ಸೋಮಣ್ಣ ಈ ಹಿಂದೆ ವರಿಷ್ಠರನ್ನು ಭೇಟಿಯಾದಾಗ ಸೋಮಣ್ಣ ತಮ್ಮನ್ನು ರಾಜ್ಯಸಭೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು. ಆದರೆ, ಫಲ ಸಿಕ್ಕಿಲ್ಲ. ಬಾಗಲಕೋಟೆ ಮೂಲದ ನಾರಾಯಣ ಭಾಂಡಗೆ ಅವಕಾಶ ಸಿಕ್ಕಿದೆ.
ರಾಜೀವ್ ಚಂದ್ರಶೇಖರ್, ಜಿಸಿ ಚಂದ್ರಶೇಖರ್, ಎಲ್ ಹನುಮಂತಯ್ಯ, ನಸೀರ್ ಅಹಮದ್ ರವರ ಅವಧಿ ಮುಕ್ತಾಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ.
ಕರ್ನಾಟಕ ಮಾತ್ರವಲ್ಲದೇ ಆಂಧ್ರ ಪ್ರದೇಶದ 3 ಸ್ಥಾನ, ಬಿಹಾರ್ 6 ಸ್ಥಾನ, ಗುಜರಾತ್ 4 ಸ್ಥಾನ, ಹರಿಯಾಣ, ಚತ್ತೀಸ್ಗಢ, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಒಂದು ಸ್ಥಾನ, ಉತ್ತರ ಪ್ರದೇಶ 10 ಸ್ಥಾನ, ತೆಲಂಗಾಣ, ಒಡಿಸ್ಸಾ, ರಾಜಸ್ಥಾನದಲ್ಲಿ ಮೂರು ಸ್ಥಾನ, ಪಶ್ಚಿಮ ಬಂಗಾಳದಲ್ಲಿ 5 ಸ್ಥಾನ, ಮಹಾರಾಷ್ಟ್ರದಲ್ಲಿ 6 ಸ್ಥಾನ, ಮಧ್ಯ ಪ್ರದೇಶದಲ್ಲಿ 5 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.

ಯಾರಿಗೆಲ್ಲ ಟಿಕೆಟ್ ?
- ಧರ್ಮಶೀಲಾ ಗುಪ್ತಾ: ಬಿಹಾರ
- ಡಾ.ಭೀಮ್ ಸಿಂಗ್: ಬಿಹಾರ
- ರಾಜಾ ದೇವೇಂದ್ರ ಪ್ರತಾಪ್ ಸಿಂಗ್: ಛತ್ತೀಸಗಢ್
- ಸುಭಾಷ್ ಬರಲಾ: ಹರಿಯಾಣ
- ನಾರಾಯಾಣ ಭಾಂಡಗೆ: ಕರ್ನಾಟಕ
- ಆರ್ಪಿಎನ್ ಸಿಂಗ್: ಉತ್ತರ ಪ್ರದೇಶ
- ಸುಭಾಂಶು ತ್ರಿವೇದಿ: ಉತ್ತರ ಪ್ರದೇಶ
- ಚೌಧರಿ ತೇಜ್ವೀರ್ ಸಿಂಗ್: ಉತ್ತರ ಪ್ರದೇಶ
- ಸಾಧನಾ ಸಿಂಗ್: ಉತ್ತರ ಪ್ರದೇಶ
- ಅಮರಪಾಲ್ ಮೌರ್ಯ: ಉತ್ತರ ಪ್ರದೇಶ
- ಸಂಗೀತಾ ಬಲ್ವಂತ್: ಉತ್ತರ ಪ್ರದೇಶ
- ನವೀನ್ ಜೈನ್: ಉತ್ತರ ಪ್ರದೇಶ
- ಮಹೇಂದ್ರ ಭಟ್: ಉತ್ತರಾಖಂಡ್
- ಸಮಿಕಾ ಭಟ್ಟಾಚಾರ್ಯ: ಪಶ್ಚಿಮ ಬಂಗಾಳ
