ಉಡುಪಿ : ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯು ಫೆಬ್ರವರಿ ೧೫ ರ ವರೆಗೆ ನಡೆಯಲಿರುವ ಹಿನ್ನೆಲೆ, ಈ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಮದ್ಯಪಾನ ಮಾಡಿ, ಗಲಭೆ ಮಾಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಬ್ರಹ್ಮಾವರ ಪೊಲೀಸ್ ಠಾಣಾ ಸರಹದ್ದಿನ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವಸ್ಥಾನದ ೧ ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್ಗಳಲ್ಲಿ ಫೆ. ೧೩ ರ ಸಂಜೆ ೬ ರಿಂದ ಫೆ. ೧೫ ರ ರಾತ್ರಿ ೧೨ ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮೇಲ್ಕಂಡ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.