ಮಣಿಪಾಲ : ಪರೀಕ್ಷೆ ಸಂದರ್ಭ ಮೊಬೈಲ್ ಫೋನ್ ಬಳಸಿದ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿಯೋರ್ವ ಆರನೇ ಮಹಡಿಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲದ ಕಾಲೇಜೊಂದರಲ್ಲಿ ಶುಕ್ರವಾರ ನಡೆದಿದೆ.
ಬಿಹಾರ ಮೂಲದ ಸತ್ಯಂ ಸುಮನ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಧ್ಯಾಹ್ನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಸತ್ಯಂ ಸುಮನ್ ಮೊಬೈಲ್ ಬಳಕೆ ಮಾಡಿದ್ದಾನೆ. ಇದನ್ನು ಕಂಡ ಶಿಕ್ಷಕರು ಆತನನ್ನು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿದ್ದಾರೆ.
ಇದರಿಂದ ಮನನೊಂದ ಆತ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Advertisement. Scroll to continue reading.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In this article:death, Diksoochi news, manipal, student sucide, suicide, udupi crime
Click to comment

































