ರಾಜಕೋಟ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 434 ರನ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ.
ರಾಜಕೋಟ್ ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಂದು ಭಾರತ ಎರಡನೇ ಇನ್ನಿಂಗ್ಸ್ ನಲ್ಲಿ 430 ರನ್ ಪೇರಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 122 ರನ್ ಗಳಿಗೆ ಆಲೌಟ್ ಆಗಿದೆ.

ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ 5 ವಿಕೆಟ್ ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ನಾಲ್ಕನೇ ಟೆಸ್ಟ್ ಪಂದ್ಯ ಫೆಬ್ರವರಿ 23ರಿಂದ ರಾಂಚಿಯಲ್ಲಿ ನಡೆಯಲಿದೆ.
Advertisement. Scroll to continue reading.

In this article:cricket, Diksoochi news, India vs england, Indian team, ravindra jadeja
Click to comment

































