Connect with us

Hi, what are you looking for?

Diksoochi News

ಕರಾವಳಿ

ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಡಾ.ಪಿ.ಎಲ್.ಧರ್ಮ ಅಧಿಕಾರ ಸ್ವೀಕಾರ

1

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಹುದ್ದೆಗೆ ಮಂಗಳೂರು ವಿವಿಯ ಮಾಜಿ ಕುಲಸಚಿವ, ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ|ಪಿ.ಎಲ್‌.ಧರ್ಮ ಅವರನ್ನು ನೇಮಕಗೊಳಿಸಿ ಮಂಗಳವಾರ ರಾಜ್ಯಪಾಲರ ಸಚಿವಾಲಯ ಆದೇಶಿಸಿದೆ.

ನೂತನ ಕುಲಪತಿ ಪ್ರೊ.ಪಿ.ಎಲ್‌.ಧರ್ಮ ಅವರು ಮಂಗಳವಾರ ಸಂಜೆ ವಿವಿ ಪ್ರಭಾರ ಕುಲಪತಿ ಪ್ರೊ. ಜಯರಾಜ್‌ ಅಮೀನ್‌ ಅವರಿಂದ ಅಧಿಕಾರ ಸ್ವೀಕರಿಸಿದರು.

4 ವರ್ಷಗಳಿಂದ ಮಂಗಳೂರು ವಿ.ವಿ. ಕುಲಪತಿಯಾಗಿದ್ದ ಪ್ರೊ.ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಕಳೆದ ವರ್ಷ ಜೂ.2ರಂದು ಸೇವಾ ನಿವೃತ್ತಿಯಾಗಿದ್ದರು. ಅಲ್ಲಿಂದ ಕುಲಪತಿ ಹುದ್ದೆ ಖಾಲಿ ಇತ್ತು. ಜೂ.2ರಂದು ಪ್ರಭಾರ ಕುಲಪತಿಯಾಗಿ ಮಂಗಳೂರು ವಿ.ವಿ. ರಾಜ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಕಲಾ ನಿಕಾಯದ ಡೀನ್‌ ಪ್ರೊ| ಜಯರಾಜ್‌ ಅಮೀನ್‌ ಅವರು ಅಧಿಕಾರದಲ್ಲಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!