Connect with us

Hi, what are you looking for?

Diksoochi News

ರಾಷ್ಟ್ರೀಯ

ಗೋಲ್ಡ್ ಶಾಕ್: ಗಗನಕ್ಕೇರಿದ ಬಂಗಾರದ ಬೆಲೆ, ರೆಕಾರ್ಡ್ ಬ್ರೇಕ್…!

1

ಬೆಂಗಳೂರು: ಚಿನ್ನದ ದರ ನಿರಂತರ ಏರುತ್ತಿದ್ದು, ಬೆಲೆಯಲ್ಲಿ ದಾಖಲೆ ಬರೆದಿದೆ. ಅದರಲ್ಲೂ ಮುಂದಿನ ತಿಂಗಳು ಮದುವೆ ಸೀಜನ್ ಆರಂಭವಾಗಿದ್ದು, ಸಾಕಷ್ಟು ಮದುವೆ, ಶುಭ ಸಮಾರಂಭಗಳು ನಡೆಯಲಿವೆ. ಈ ಸಮಯದಲ್ಲೇ ಜನರಿಗೆ ಗೋಲ್ಡ್ ಶಾಕ್ ಎದುರಾಗಿದ್ದು, ಎಲ್ಲಾ ರೆರ್ಕಾಡ್‍ಗಳನ್ನ ಬ್ರೇಕ್ ಮಾಡಿದೆ.

ಭಾನುವಾರ ಬಂಗಾರದ ರೇಟ್ ಚಿನಿವಾರಪೇಟೆಯ ಇತಿಹಾಸದಲ್ಲೇ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಚಿನ್ನದ ಬೆಲೆ 67 ಸಾವಿರದ ಗಡಿ ದಾಟಿದ್ದು, ಬೆಳ್ಳಿ 75 ಸಾವಿರವನ್ನು ಕ್ರಾಸ್ ಮಾಡಿದೆ.

ನಿನ್ನೆ ಚಿನ್ನ, ಬೆಳ್ಳಿಯ ರೇಟ್ ಎಷ್ಟಿತ್ತು?
24 ಕ್ಯಾರೆಟ್ 10 ಗ್ರಾಂ ಚಿನ್ನ- 67,800 ರೂ.
22 ಕ್ಯಾರೆಟ್ 10 ಗ್ರಾಂ ಚಿನ್ನ- 61,100 ರೂ.
1 ಕೆ.ಜಿ ಬೆಳ್ಳಿ- 75,000 ರೂ.

Advertisement. Scroll to continue reading.

ಇದೊಂದು ಆಲ್ ಟೈಮ್ ಹೈಯೆಸ್ಟ್ ರೆರ್ಕಾಡ್ ಆಗಿದೆ. ಬಂಗಾರ ಯಾವತ್ತೂ ಈ ರೇಟ್‍ಗೆ ತಲುಪಿರಲಿಲ್ಲ. ಮುಂದಿನ ತಿಂಗಳಿನಿಂದ ಮದುವೆ ಸೀಜನ್ ಇದ್ದು, ಅಕ್ಷಯ ತೃತೀಯಕ್ಕೂ ಚಿನ್ನಕ್ಕೆ ಡಿಮ್ಯಾಂಡ್ ಇರೋದ್ರಿಂದ ಈ ರೇಟ್ ಇದೇ ತರಹ ಮುಂದುವರಿಯಬಹುದು.

ದರ ಏರಿಕೆಗೆ ಕಾರಣಗಳೇನು?: ಅಮೆರಿಕದ ಡಾಲರ್ ದುರ್ಬಲವಾಗಿರೋದು. ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ಬಂಗಾರದ ಮೇಲೆ ಇನ್ವೆಸ್ಟ್ ಮಾಡ್ತಾ ಇರೋದು ಚಿನ್ನದ ಪೂರೈಕೆಗಿಂತ ಡಿಮ್ಯಾಂಡ್ ಹೆಚ್ಚಾಗಿದೆ.

ಚಿನ್ನದ ರೇಟ್ ಮತ್ತಷ್ಟು ಗಗನಕ್ಕೆ ಏರುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟದ ಮಧ್ಯೆ ಗ್ರಾಹಕರಿಗೆ ಮತ್ತೊಂದು ಬರೆ ಬಿದ್ದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!