Connect with us

Hi, what are you looking for?

Diksoochi News

ರಾಜ್ಯ

ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಬೆಡ್ ರೂಮ್‍ನಲ್ಲಿ ಪತ್ತೆ: ಕೊಲೆ ಶಂಕೆ

0

ರಾಯಚೂರು: ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳ ಶವ ಅನುಮಾನಾಸ್ಪದವಾಗಿ ಮನೆಯ ಬೆಡ್ ರೂಮ್‍ನಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿಯನ್ನು ಸುನೀತಾ (26) ಎಂದು ಗುರುತಿಸಲಾಗಿದೆ. ಯುವತಿಯ ಶವ ರೂಮ್‍ನಲ್ಲಿ ರಕ್ತ ಸಿಕ್ತವಾಗಿ ಪತ್ತೆಯಾಗಿದ್ದು, ಯುವತಿ ದೇಹದ ಮೇಲೆ ಚಾಕುವಿನಿಂದ ಹಲ್ಲೆಯಾದ ಗುರುತುಗಳು ಕಂಡು ಬಂದಿದೆ. ಯುವತಿಯ ಸಾವು ಕೊಲೆ ಎಂಬ ಸಂಶಯ ವ್ಯಕ್ತಪಡಿಸಿ ಆಕೆಯ ಅಕ್ಕ ದೂರು ದಾಖಲಿಸಿದ್ದಾರೆ.

ಇತ್ತೀಚೆಗಷ್ಟೇ ಯುವತಿಯ ನಿಶ್ಚಿತಾರ್ಥವಾಗಿತ್ತು. ಒಲ್ಲದ ಮನಸ್ಸಿನಿಂದ ಯುವತಿ ಮದುವೆಗೆ ಒಪ್ಪಿಕೊಂಡಿದ್ದಳು. ಮನೆಯವರ ಮದುವೆ ಪ್ರಸ್ತಾಪಕ್ಕೆ ಯುವತಿ ಮನನೊಂದಿದ್ದಳು ಎಂದು ತಿಳಿದು ಬಂದಿದೆ.

Advertisement. Scroll to continue reading.

ಈ ಸಂಬಂಧ ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿದೆ

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!