ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ಮುಖಂಡ ಕೆ.ವಸಂತ ಬಂಗೇರ (79) ವಿಧಿವಶರಾಗಿದ್ದಾರೆ. ಇಂದು ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೇ ಬುಧವಾರ ಮೃತಪಟ್ಟಿದ್ದಾರೆ. ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Advertisement. Scroll to continue reading.

ವಸಂತ ಬಂಗೇರ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿದ್ದರು.
In this article:Belthangady, bjp, congress, Diksoochi news, Featured, vasantha bangera
Click to comment

































