ಉಡುಪಿ : ಕಾರು ಮತ್ತು ಮೀನು ಲಾರಿ ಮುಖಾಮುಖಿ ಡಿಕ್ಕಿಯಾಗಿ, ಹಲವರು ಗಾಯಗೊಂಡಿರುವ ಘಟನೆ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ನಡೆದಿದೆ.
ಮೀನಿನ ಟ್ಯಾಂಕರ್ ಕೇರಳದ ಕಡೆಗೆ ಸಾಗುತ್ತಿತ್ತು. ಈ ವೇಳೆ ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿದ ಟ್ರಕ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಲಾರಿ ಹಾಗೂ ಕಾರು ಜಖಂಗೊಂಡಿದೆ.
ಘಟನೆಯಿಂದ ಕೆಲ ಕಾಲ ಸಂಚಾರಕ್ಕೆ ಅಡಚಣೆಯಾಗಿತ್ತು. ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಮೀನುಗಳನ್ನು ಬೇರೆ ವಾಹನಕ್ಕೆ ಸ್ಥಳಾಂತರ ಮಾಡಲಾಯಿತು.
Advertisement. Scroll to continue reading.
