ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಬಂಧನಕ್ಕೆ ಎಸ್ ಐ ಟಿ ಅಧಿಕಾರು ಕಾದು ಕುಳಿತಿದ್ದಾರೆ. ಈ ನಡುವೆ ಪ್ರಜ್ವಲ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಬುಧವಾರ ತಿರಸ್ಕರಿಸಿದೆ.
ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ. ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಜ್ವಲ್ ಪರ ವಕೀಲ ಅರುಣ್ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು.
ಟಿಕೆಟ್ ಬುಕ್ ?

ಇತ್ತ ಪೆನ್ ಡ್ರೈವ್ ಸದ್ದು ಮಾಡುತ್ತಿದ್ದಂತೆ, ವಿದೇಶ ಸೇರಿದ್ದ ಪ್ರಜ್ವಲ್ ರೇವಣ್ಣ ಮಂಗಳವಾರ ವೀಡಿಯೋ ಹೇಳಿಕೆ ನೀಡಿದ್ದರು. ಅದರಲ್ಲಿ ಮೇ 31 ರಂದು ಎಸ್ ಐ ಟಿ ಮುಂದೆ ಹಾಜರಾಗುವುದಾಗಿ ತಿಳಿಸಿದ್ದರು.
ಹಾಗಾಗಿ ಮೇ 30 ರಂದು ಮ್ಯೂನಿಚ್ನಿಂದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಪ್ರಜ್ವಲ್ ವಿಮಾನ ಟಿಕೆಟ್ ಕೂಡ ಬುಕ್ ಮಾಡಿದ್ದು, ಮೇ 31 ರಂದು ಅವರು ನಗರಕ್ಕೆ ಬಂದಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರೋ ಪ್ರಜ್ವಲ್ ರೇವಣ್ಣರನ್ನು ವಿಮಾನ ನಿಲ್ದಾಣದಲ್ಲೇ ಬಂಧಿಸಲು ಎಸ್ ಐಟಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
