ಕೋಟ :ಟಿಟಿ ವಾಹನ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಹೈಸ್ಕೂಲ್ ಬಳಿ ನಡೆದಿದೆ.
ಕೇರಳದಿಂದ ಕೊಲ್ಲೂರಿಗೆ ಪ್ರವಾಸಕ್ಕೆ ಹೊರಟ್ಟಿದ್ದ ಟಿಟಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಲ್ಲದೇ, ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದಿದೆ. ಬಳಿಕ ಸಮೀಪದ ಕಂದಕಕ್ಕೆ ಉರುಳಿದೆ.
ಟಿಟಿಯಲ್ಲಿ 15 ಜನ ಪ್ರಯಾಣಿಕರಿದ್ದು, 10 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಟ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.